ಮುಂಬರುವ ರಾಜ್ಯ ಪ್ರಸಿದ್ಧ ಶಿರಸಿ ಜಾತ್ರೆಗೆ ಸಂಬಂಧಿಸಿ ಬರುವ ಭಕ್ತಾದಿಗಳಿಗೆ ವಸತಿ, ಊಟ, ನೀರು ಒಳಗೊಂಡ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಹಾಗು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರುಗಳಿಗೆ ಸೋಮವಾರ ಸಂಜೆ 4.30ರ ವೇಳೆ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮನವಿ ಸಲ್ಲಿಸಿದರು. ನಗರದ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಅವರು ಪಾಲ್ಗೊಂಡು ಮನವಿ ನೀಡಿದರು. ಸೌಕರ್ಯಗಳನ್ನು ಸಚಿವರು ಕಲ್ಪಿಸುವ ಭರವಸೆ ನೀಡಿದ್ದಾರೆ