ರಾಣೇಬೆನ್ನೂರು: ಖಾಸಗಿ ಫೈನಾನ್ಸಗಳ ಕಿರುಕುಳ ಖಂಡಿಸಿ ರಾಣೆಬೆನ್ನೂರಲ್ಲಿ ರೈತಸಂಘ ಮತ್ತು ಹಸಿರುಸೇನೆ ಪ್ರತಿಭಟನೆ
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಸಗಿ ಫೈನಾನ್ಸಗಳ ಕಾಟ ಮತ್ತೆ ಶುರುವಾಗಿದೆ. ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ರೈತಸಂಘ ಮತ್ತು ಹಸಿರುಸೇನೆ ಪ್ರತಿಭಟನೆ ನಡೆಸಿತು. ನಗರದ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.