ಶಿರಸಿ: ಕೃಷಿ ಅರಣ್ಯದಿಂದ ಕೃಷಿ ಭೂಮಿ ಅವಶ್ಯಕತೆ ಪೂರೈಸಲು ಸಾಧ್ಯ: ಉಂಚಳ್ಳಿಯಲ್ಲಿ ಅರಣ್ಯ ಮಹಾವಿದ್ಯಾಲಯದ ಡೀನ್ ವಾಸುದೇವ
ಶಿರಸಿ: ಕೃಷಿ ಅರಣ್ಯದಿಂದ ಮಾತ್ರ ಕೃಷಿ ಭೂಮಿಯ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯ ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಆರ್.ವಾಸುದೇವರವರು ಅಭಿಪ್ರಾಯಪಟ್ಟರು. ಉಂಚಳ್ಳಿಯ ತುಡ್ವಿ ಮನೆಯಲ್ಲಿ ಸ್ಕೊಡ್‌ವೆಸ್ ಸಂಸ್ಥೆಯವರು ಕೃಷಿ ಅರಣ್ಯ ಸಂರಕ್ಷಣಾ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಅರಣ್ಯ ಸಸಿಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಆಧುನಿಕ ಜೀವನ ಶೈಲಿಯಲ್ಲಿ ಸಾವಯವ ಆಹಾರ ಪದ್ಧತಿಗೆ ಹೆಚ್ಚಿನ ಆದ್ಯತೆ ದೊರೆಯುತ್ತಿರುವುದರಿಂದ ಸಾವಯವ ಆಹಾರ ಉತ್ಪಾದನೆಗೆ ರೈತರು ತಮ್ಮ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಅರಣ್ಯವನ್ನು ಸಂರಕ್ಷಿಸಿಕೊಳ್ಳಬೇಕು ಎಂದರು.