ಹುಬ್ಬಳ್ಳಿಯಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಸಬಾಪೆಟ್ ಠಾಣೆಯ ಪೊಲೀಸರಿಂದ ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿಯ ನೇಕಾರ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಸಬಾಪೆಟ್ ಠಾಣೆಯ ಪೊಲೀಸ್ ಇನ್ಸ್ಪಕರ್ ಲಕ್ಷ್ಮಣ್ ನಾಯಕ್ ಅವರಿಂದ ಮಕ್ಕಳಿಗೆ ಕಾನೂನು ಅರಿವು ಮೂಡಿಸಲಾಯಿತು. ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಏನು ಮಾಡಬೇಕೆಂದು ಯಾವ ರೀತಿ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.