ಶ್ರೀನಿವಾಸಪುರ: ದೇಶವನ್ನು ಪ್ರಗತಿಯತ್ತ ನಡೆಸುತ್ತಿದ್ದಾರೆ: ಪಟ್ಟಣದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ರೋಣುರು ಚಂದ್ರಶೇಖರ್
ದೇಶವನ್ನು ಪ್ರಗತಿಯತ್ತ ನಡೆಸುತ್ತಿದ್ದಾರೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ರೋಣುರು ಚಂದ್ರಶೇಖರ್ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆಯನ್ನು ಶ್ರೀನಿವಾಸಪುರ ಪಟ್ಟಣದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕಗಳನ್ನು ನೆರವೇರಿಸಲಾಯಿತು. ಬಿಜೆಪಿ ತಾಲ್ಲೂಕು ಅಧ್ಯಕ್ಷ ರೋಣೂರು ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಅನೇಕ ಮೋದಿ ಅಭಿಮಾನಿಗಳು, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ, ಪ್ರಧಾನಿಯವರಿಗೆ ಶುಭ ಹಾರೈಸಿದರು.