ಸಾಗರ: ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಶಾಸಕರ ಖರೀದಿ ಕೇಂದ್ರ ಪ್ರಾರಂಭವಾಗಿದೆ, ಸಾಗರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಸ್ಫೋಟಕ ಹೇಳಿಕೆ
Sagar, Shimoga | Nov 27, 2025 ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಶಾಸಕರ ಖರೀದಿ ಕೇಂದ್ರ ಪ್ರಾರಂಭ ಮಾಡಿದ್ದಾರೆ. ಅಧಿಕಾರ ಉಳಿಸಿ ಕೊಳ್ಳಲು ಮುಖ್ಯಮಂತ್ರಿಗಳು, ಅಧಿಕಾರ ಪಡೆಯಲು ಉಪ ಮುಖ್ಯಮಂತ್ರಿಗಳು ಶಾಸಕರ ಖರೀದಿ ಪ್ರಾರಂಭಿಸಿದ್ದು, ಇವರಿಗೆ ರೈತರ ಹಿತಕಾಯುವ ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಸಮಯ ಇಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸಾಗರದಲ್ಲಿ ಗುರುವಾರ ಸಂಜೆ 5 ಗಂಟೆಗೆ ಮಾತನಾಡಿದ ಅವರು, ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೆಂಬಲಬೆಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡಲಿ ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಅಭಿವೃದ್ಧಿ ಶೂನ್ಯ ಎಂದರು.