ಶಿರಸಿ : ಉತ್ತರ ಕನ್ನಡ ಸಂಸದ ವಿಶ್ವೇಶ್ವಹೆಗಕಾಗ ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ನಮ್ಮ ಜಿಲ್ಲೆಯ ಪ್ರಮುಖ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಾದ ಬನವಾಸಿ ಮತ್ತು ಗೋಕರ್ಣವನ್ನು ಕೇಂದ್ರೀಕರಿಸಿ, ಜಿಲ್ಲೆಯ ಪ್ರವಾಸೋದ್ಯಮ ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಮಹತ್ವದ ಕುರಿತು ಮನವಿ ನೀಡಿದರು.