ಪೊನ್ನಂಪೇಟೆ: ಮಹಿಳಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ
ಪೊನ್ನಂಪೇಟೆಯ ಭಗವತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರು ನೂತನ ಮಹಿಳಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು. ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಶಾಸಕರು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿದರು.