ರಾಮನಗರ: ಬೈಕ್ನಲ್ಲಿ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ರಾಮನಗರದ ಮಂಚನಬೆಲೆ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ರೈತ ಬೋರೆಗೌಡ ಮೇಲೆ ಚಿರತೆ ದಾಳಿ ನಡೆಸಿದೆ. ಕಾಲಿಗೆ ಗಾಯಗೊಂಡಿದ್ದ ಬೋರೆಗೌಡ ಅವರು ಬಿಡದಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಚಿರತೆ ದಾಳಿಯಿಂದ ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.