ಹೊಸ ವರ್ಷದ ಸಂಭ್ರಮಾಚರಣೆಯನ್ನು ಶಾಂತಿಯುತವಾಗಿ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಾಗೂ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಪೊಲೀಸ್ ಇಲಾಖೆಯಿಂದ ಕೈಗೊಳ್ಳಲಾಗಿರುವ ಭದ್ರತಾ ಮತ್ತು ಮುನ್ನೆಚ್ಚರಿಕಾ ಕ್ರಮಗಳು, ಮಹಿಳಾ ಸುರಕ್ಷತೆಗೆ ನೀಡಲಾಗಿರುವ ಆದ್ಯತೆ, ಜನದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವ್ಯವಸ್ಥೆಗಳು, ಸುಗಮ ಸಂಚಾರ ವ್ಯವಸ್ಥೆ ಹಾಗೂ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಸ್ಪಂದಿಸಲು ಕೈಗೊಂಡಿರುವ ಪೂರ್ವಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.