ಬೆಂಗಳೂರು ಉತ್ತರ: ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ, ಚುನಾವಣೆ ವ್ಯವಸ್ಥೆ ಕಾಪಾಡಿ: ನಗರದಲ್ಲಿ ಡಿಸಿಎಂ
ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು, “ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಜೀವನದ ಉಸಿರು ಎಂದು ಮಹಾತ್ಮಾ ಗಾಂಧೀಜಿ ಅವರು ಹೇಳಿದ್ದಾರೆ.