ಕೆಐಎಡಿಬಿಯಲ್ಲಿ ನಡೆದ ಬಹುಕೋಟಿ ಹಗರಣದ ಕುರಿತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ತಿಳಿಸಿದರು. ನಗರದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಐಎ.ಡಿ.ಬಿ.ಹಗರಣದ ಕುರಿತು ಸಿಬಿಐ ಹಾಗೂ ಇಡಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರೂ ಹಗರಣದ ಕುರಿತು ಸದನದಲ್ಲಿ ಧಾರವಾಡ ಜಿಲ್ಲೆಯ ಯಾವೋಬ್ಬ ಜನಪ್ರತಿನಿಧಿಗಳು ಧ್ವನಿ ಎತ್ತದೇ ಇರುವುದು ಖಂಡನ