ಬಳ್ಳಾರಿ: ಐಪಿಎಸ್ ದಯಾನಂದ ಅವರನ್ನು ಮರು ನೇಮಕ ಮಾಡುವಂತೆ ನಗರದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯ
ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿರುವ ಐಪಿಎಸ್ ಅಧಿಕಾರಿ, ಬೆಂಗಳೂರಿನ ನಿಕಟಪೂರ್ವ ಪೊಲೀಸ್ ಆಯುಕ್ತ ಬಿ.ದಯಾನಂದರನ್ನು ರಾಜ್ಯ ಸರ್ಕಾರ ತಕ್ಷಣ ಹುದ್ದೆಗೆ ಮರು ನೇಮಕ ಮಾಡಬೇಕೆಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಬಳ್ಳಾರಿ ಜಿಲ್ಲಾಧ್ಯಕ್ಷ ಡಾ.ಗಾದಿಲಿಂಗನಗೌಡ ಹೇಳಿದರು. ಸೋಮವಾರ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಎದುರು ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.