ತೀರ್ಥಹಳ್ಳಿ ಇತಿಹಾಸ ಪ್ರಸಿದ್ಧ ಎಳ್ಳಮಾವಾಸ್ಯೆ ಜಾತ್ರೆ ಪ್ರಯುಕ್ತ ರಾಮಕೊಂಡದಲ್ಲಿ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡುವ ಮೂಲಕ ಪುನೀತರಾದರು. ಶುಕ್ರವಾರ ಬೆಳಗಿನ ಜಾವದಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.ತೀರ್ಥಹಳ್ಳಿ ಮಾತ್ರವಲ್ಲದೆ ಬೇರೆ ಊರುಗಳಿಂದ ಪ್ರತಿವರ್ಷವೂ ಸಾವಿರಾರು ಭಕ್ತರು ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.