ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಭಾನುವಾರ ನಗರದ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ, ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.