ಬೆಂಗಳೂರಿನ ವಿಧಾನಸೌಧದ ಮುಂದೆ ಡಾ. ನಾಗೇಂದ್ರ ಶಿರೂರು ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋಲದೇವನಹಳ್ಳಿಯಲ್ಲಿ ತಮಗೆ ಸಮಸ್ಯೆ ಇದೆ ಎಂದು ವಿಷ ಸೇವನೆ ಮಾಡಿದ್ದ ವ್ಯಕ್ತಿಗೆ ಪೊಲೀಸರೇ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಕ್ರಮ ಬಾಂಗ್ಲಾದೇಶ ವಲಸಿಗರ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಈ ಕಿರುಕುಳ ನೀಡಲಾಗಿತ್ತು ಎಂದು ಹೇಳಲಾಗಿದೆ.