ದಾವಣಗೆರೆ: ನಲ್ಕುದರೆ ಗೋಮಾಳದಲ್ಲಿ ವ್ಯಕ್ತಿ ಆತ್ಮಹತ್ಯೆ; ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಬಸವಂತಪ್ಪ
ಚನ್ನಗಿರಿ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ನಲ್ಕುದರೆ ಗ್ರಾಮದ ಗೋಮಾಳದಲ್ಲಿ ವ್ಯಕ್ತಿ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಸುರೇಶ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬದಿದೆ. ದಾವಣಗೆರೆ ನಗರದ ಚಿಗಟೇರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳಕ್ಕೆ ಶಾಸಕ ಬಸವಂತಪ್ಪ ಭೇಟಿ ನೀಡಿ ವೀಕ್ಷಣೆ ಮಾಡಿ, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವ್ಯಕ್ತಿಯ ಪತ್ನಿ ಮಮತಾ ಗಂಡನ ಸಾವಿನ ಬಗ್ಗೆ ಅನುಮಾನವಿದೆ ಎಂದು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.