ಮಸ್ಕಲ್ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ–ಯುಕೆಜಿ ತರಗತಿಗಳ ಪ್ರಾರಂಭ ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆಗೆ ಆರಂಭಿಕ ಶಿಕ್ಷಣ ಅತ್ಯಂತ ಮುಖ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ವೈ. ಕಾಲಾವತಿ, ಶಿಶು ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ, ಮೇಲ್ವಿಚಾರಕಿ ಜ್ಯೋತಿ ಹಾಗೂ ಅಂಗನವಾಡಿ ಶಿಕ್ಷಕಿಯರು ಉಪಸ್ಥಿತರಿದ್ದರು.