ಹುಬ್ಬಳ್ಳಿಯ ರುದ್ರಾಕ್ಷಿ ಮಠದಲ್ಲಿ ಶ್ರೀ ನಿಜಗುಣ ಶಿವಯೋಗಿಗಳ ಜಯಂತಿ ಉತ್ಸವದ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ, ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಆಯುರ್ವೇದ ಆಸ್ಪತ್ರೆಯ ಡಾ. ಸಿದ್ದನಗೌಡ ಪಾಟೀಲರ ತಂಡವು ಆರೋಗ್ಯ ತಪಾಸಣೆ ನಡೆಸಿತು. ಜಯಪ್ರಿಯ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರು ಕಣ್ಣಿನ ತಪಾಸಣೆ ಮಾಡಿದರು. ಡಾ. ಕಿಶೋರ್ ಬಾಗಲಕೋಟೆ ಅವರ ನೇತೃತ್ವದಲ್ಲಿ ದಂತ ತಪಾಸಣೆಯೂ ನಡೆಯಿತು.