ಸಕಲೇಶಪುರ: ಕಿರೇಹಳ್ಳಿ ಗ್ರಾಮದಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಕಳ್ಳರು ಸಿಸಿ ಕ್ಯಾಮರದಲ್ಲಿ ದೃಶ್ಯ ಸೀರೆ
ಕಳ್ಳರು ಮನೆಗಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಟ್ಟಣದಲ್ಲಿ ಕಳ್ಳರ ಗುಂಪೊಂದು ಮನೆಗಳ್ಳತನಕ್ಕೆ ವಿಫಲ ಯತ್ನ ನಡೆಸಿದೆ.ಮನೆಯ ಬಾಗಿಲ ಮುರಿಯಲು ಹೊಂಚು ಹಾಕುತ್ತಿದ್ದ ವೇಳೆ ಮನೆಯವರನ್ನು ಕಂಡ ಕೂಡಲೇ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕಳ್ಳರು ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಪಟ್ಟಣದ ಸುತ್ತಮುತ್ತ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೊಲೀಸರು ಹೆಚ್ಚಿನ ಗಮನಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.