ಪಟ್ಟಣದ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠಕ್ಕೆ ಶೃಂಗೇರಿ ಮಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಹಾಗೂ ಜಗದ್ಗುರು ಶ್ರೀ ವಿಧುಶೇಖರ ಸ್ವಾಮೀಜಿಗಳು ಭಾನುವಾರ ಭೇಟಿ ನೀಡಿ ಸಾವಿರಾರು ಭಕ್ತರಿಗೆ ಆಶೀರ್ವಚನ ನೀಡಿದರು. ಈ ವೇಳೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮೀಜಿಗಳ ದರ್ಶನ ಪಡೆದರು. ಇನ್ನು ಈ ಸಂದರ್ಭದಲ್ಲಿ ಶಾಸಕ ಡಿ. ರವಿಶಂಕರ್ ಸಹ ಮಠಕ್ಕೆ ಭೇಟಿ ನೀಡಿ ತಾಂಬೂಲ ನೀಡುವ ಮೂಲಕ ಸ್ವಾಮೀಜಿಗಳನ್ನು ಗೌರವಿಸಿ ಆಶೀರ್ವಾದ ಪಡೆದುಕೊಂಡರು.