ಕೊಳ್ಳೇಗಾಲ: ಸತ್ತೇಗಾಲ ಸೇತುವೆ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿರುವ ಹೊಸ ಸೇತುವೆ ಬಳಿ ಸುಮಾರು 50 ರಿಂದ 60 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸತ್ತೇಗಾಲ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಪ್ರಸನ್ನ ಅವರು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದರು. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮಹಜರ್ ನಡೆಸಲಾಯಿತು. ವಾರಸುದಾರರು ಯಾರು ಇಲ್ಲದ ಕಾರಣ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ