ವಿಧಾನಸೌಧದ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ಹಂಚಿಕೆ ಕುರಿತ ಸಭೆಯನ್ನು ನಡೆಸಿ, ಸರ್ಕಾರದ ಮುಂದಿರುವ ಸವಾಲುಗಳು ಮತ್ತು ಸಾಧ್ಯ ಪರಿಹಾರಗಳ ಕುರಿತು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಸಚಿವರಾದ ಹೆಚ್.ಕೆ. ಪಾಟೀಲ್, ಎನ್. ಚಲುವರಾಯಸ್ವಾಮಿ, ಆರ್.ಬಿ. ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಡಿಸ್ಟಿಲರಿಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.