ಬಂಟ್ವಾಳ: ಬಂಟ್ವಾಳದ ಪಂಜಿಕಲ್ಲು ಬಾಲೇಶ್ವರ ಗರಡಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಸೋಣ ನೇಮೋತ್ಸವ
ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಬಾಲೇಶ್ವರ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಸಾಂಪ್ರದಾಯಿಕ ಸೋಣ ನೇಮೋತ್ಸವ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಗಣ್ಯರು ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.