ಮೈಸೂರು: ನಗರದಲ್ಲಿ ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ" ಚಾಲನೆ ನೀಡಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
Mysuru, Mysuru | Sep 20, 2025 ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಕಲಾಮಂದಿರದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಿದ್ದ "ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ" ಚಾಲನೆ ನೀಡಿದರು. ಈ ವೇಳೆ ಶಾಸಕರಾದ ತನ್ವೀರ್ ಸೇಠ್ ಅವರು, ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಮತ್ತಿತರರು ಇದ್ದರು.