ತಾಲ್ಲೂಕಿನ ಮೋಕಾ ಗ್ರಾಮದ ಈಶ್ವರ ದೇವಸ್ಥಾನದ ಬಳಿ ಸುಮಾರು 70 ರಿಂದ 75 ವರ್ಷದ ಅನಾಮಧೇಯ ವೃದ್ಧೆಯು ಡಿ.09 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದು, ವಾರಸುದಾರರ ಮಾಹಿತಿ ಇರುವುದಿಲ್ಲ. ಈ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ: 4.5 ಅಡಿ ಎತ್ತರ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ತಿಳಿ ಹಸಿರು ಬಣ್ಣದ ಸೀರೆ, ಆರೆಂಜ್ ಬಣ್ಣದ ಸ್ವೆಟರ್ ಧರಿಸಿರುತ್ತಾಳೆ. ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಮೋಕಾ ಪೊಲೀಸ್ ಠಾಣೆಯ ಸಂಪರ್ಕಿಸಬಹುದು ಎಂದು ಸೋಮವಾರ ಮಧ್ಯಾಹ್ನ 12ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------