ಶಿವಮೊಗ್ಗ: ಡೆಂಘಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಕರ್ನಾಟಕ ನಾಡು ರಕ್ಷಣಾ ವೇದಿಕೆ ಮನವಿ
ಶಿವಮೊಗ್ಗ ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ ಕೂಡಲೇ ಡೆಂಗ್ಯೂ ನಿಯಂತ್ರಣದ ಸಂಬಂಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಂಗಳವಾರ ಮಹಾನಗರ ಪಾಲಿಕೆ ಆಯುಕ್ತರಿಗೆ ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಮನವಿಯನ್ನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎರಡು ದಿನಕ್ಕೆ ಒಮ್ಮೆ ಔಷಧ ಸಿಂಪಡಣೆ ಮಾಡಬೇಕು ನಿರಂತರ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಆಯತರಿಗೆ ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದಿನೇಶ್ ಪ್ರಧಾನ ಕಾರ್ಯದರ್ಶಿ ಸಂಕೇತ್ ನಗರ ಉಪಾಧ್ಯಕ್ಷ ಸಚಿನ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.