ಬೆಳಗಾವಿ: ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ನ.1 ರಂದು ಧರಣಿ ಸತ್ಯಾಗ್ರಹ: ನಗರದಲ್ಲಿ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ ಡಿ ಹಿರೇಮಠ
ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ನ.1 ರಂದು ಧರಣಿ ಸತ್ಯಾಗ್ರಹ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ ಡಿ ಹಿರೇಮಠ ಹೇಳಿದರು ನವೆಂಬರ್ ಒಂದರಂದು ಸುವರ್ಣ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಹಾಗೂ ಬೆಳಗಾವಿಯನ್ನು ಎರಡನೇ ರಾಜ್ಯ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು ಮತ್ತು ವಿವಿಧ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗಲಿದೆ ಎಂದುಹೇಳಿದರು