ಹಾರೋಹಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಬಾಲಕರ ವಿದ್ಯಾರ್ಥಿ ನಿಲಯದ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಹಾರೋಹಳ್ಳಿ ಪಟ್ಟಣದಲ್ಲಿ ನೂತನ ಡಾ. ಬಿ.ಆರ್. ಅಂಬೇಡ್ಕರ್ ಬಾಲಕರ ವಿದ್ಯಾರ್ಥಿ ನಿಲಯದ ನಿರ್ಮಾಣ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.