ಹಳಿಯಾಳ : ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಳಿಯಾಳ- ದಾಂಡೇಲಿ - ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಆಗಿರುವ ಆರ್.ವಿ.ದೇಶಪಾಂಡೆಯವರು ಬೆಂಗಳೂರಿನ ಅವರ ಸ್ವಗೃಹದಲ್ಲಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಪಕ್ಷದ ಇತರ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.