ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಕಟ್ಟ ಕಡೆಯ ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ಸೇವೆ ಮಾಡುವುದೇ ಮುಖ್ಯ ಧ್ಯೇಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಹೇಳಿದರು. ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ವಿಠಲಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ಮಧ್ಯಾಹ್ನ 12ಗಂಟೆ ಆಯೋಜಿಸಿದ್ದ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಇದೇ ವಿಠಲಾಪುರ ಗ್ರಾಮದಿಂದ. ನನ್ನನ್ನು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದು ಇದೇ ಸಂಡೂರು ಜನತೆ. 2004 ರಲ