ತಿಪಟೂರು: ಕೆಎಸ್ಆರ್ಟಿಸಿ ಬಸ್-ಬೈಕ್ ಅಪಘಾತ, ಇಬ್ಬರು ಯುವಕರ ದುರ್ಮರಣ
ತಿಪಟೂರಿನ ಬಾಲಾಜಿ ಕಲ್ಯಾಣ ಮಂಟಪದ ಬಳಿ ಭಾನುವಾರ ಬೆಳಗಿನ ಜಾವ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಜು ಮತ್ತು ಹರ್ಷ ಎಂಬ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.