ಚಾಮರಾಜಪೇಟೆಯಲ್ಲಿ ನಡೆದ ರಾಷ್ಟ್ರೋತ್ಥಾನ ಸಾಹಿತ್ಯದ 5ನೇ ಕನ್ನಡ ಪುಸ್ತಕ ಹಬ್ಬದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಅವರು ‘ಸುಭದ್ರ ಬದುಕು – ಸದೃಢ ದೇಶಕ್ಕಾಗಿ ಪಂಚ ಪರಿವರ್ತನೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಮಾಜದಲ್ಲಿ ಶಿಸ್ತು, ಸಕಾರಾತ್ಮಕತೆ ಮತ್ತು ಸಾಮಾಜಿಕ ಬದ್ಧತೆ ಅಗತ್ಯವಿದೆ ಎಂದು ಅವರು ಇಲ್ಲಿ ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೋತ್ಥಾನ ಪರಿಷತ್ನ ಖಜಾಂಚಿ ಕೆ. ಎಸ್. ನಾರಾಯಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.