ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸಂಘದ ಕಾರ್ಯದರ್ಶಿ ಮತ್ತು ಕಾರ್ಯಕಾರಿಣಿ ಸದಸ್ಯರಾಗಿ ಪತ್ರಕರ್ತ ದಂಪತಿಗಳಾದ ಯಲ್ಲಾಪುರದ ಜಯರಾಜ ಗೋವಿ ಹಾಗೂ ಪ್ರಭಾವತಿ ಜಯರಾಜ ಗೋವಿ ದಂಪತಿಗಳು ಅವಿರೋಧವಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಹಾಲಿ ಸದಸ್ಯರಾಗಿದ್ದ ಯಲ್ಲಾಪುರದ ಹೊಸದಿಗಂತ ಪತ್ರಿಕೆಯ ವರದಿಗಾರ್ತಿ ಪ್ರಭಾವತಿ ಜಯರಾಜ ಗೋವಿ ಅವರು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಹುದ್ದೆಗೆ ನಾಮಪತ್ರವನ್ನು ಸಲ್ಲಿಸಿದ್ದರು.