ಕಾಗವಾಡ: ಕಾಗವಾಡದಲ್ಲಿ ಪ್ರಜಾ ಸೇವೆ ಆಂದೋಲನಕ್ಕೆ ಮುತ್ತಿಗೆ: ವಿದ್ಯುತ್ ಕಡಿತಕ್ಕೆ ರೈತರ ಆಕ್ರೋಶ
ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ ಗ್ರಾಮದಲ್ಲಿ ನಡೆದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ರೈತರು ಮುತ್ತಿಗೆ ಹಾಕಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ಕಡಿತಗೊಳಿಸುತ್ತಿರುವುದನ್ನು ವಿರೋಧಿಸಿ ಮತ್ತು ಸತತ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ತಾಲ್ಲೂಕಾಡಳಿತದ ಕಾರ್ಯಕ್ರಮದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.