ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಶಾಮನೂರು ಶಿವಶಂಕರಪ್ಪರಿಗೆ ಶ್ರದ್ಧಾಂಜಲಿ ಕೋಲಾರ: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಹಿನ್ನಲೆ ನಗರದ ಅರಳೆಪೇಟೆಯಲ್ಲಿರುವ ಬಸವ ದೇವಸ್ಥಾನದ ಆವರಣದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಸಿದ್ದಲಿಂಗ ಒಡೆಯರ್ ಮ