ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯದ ನಂತರ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು, 20.47 ಕೋಟಿ ವೆಚ್ಚದಲ್ಲಿ ಕೆ - ಶೋರ್ ಯೋಜನೆಯಡಿಯಲ್ಲಿ ತಾಂತ್ರಿಕ ಹಾಗೂ ನಿರ್ವಹಣೆ ಸೇವೆಗಳನ್ನು ಕೈಗೊಳ್ಳಲು ಅನುಮೋದನೆ ಸಂಪುಟ ನೀಡಲಾಗಿದೆ. 360 ಕೋಟಿ ವೆಚ್ಚದಲ್ಲಿ ರಾಜ್ಯದ ವಿವಿಧ ಶಾಲೆಗಳಲ್ಲಿನ ಶಾಲಾ ಕೊಠಡಿ ಗಳ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ರಾಜ್ಯದ ಕರಾವಳಿಯಲ್ಲಿರುವ ನಾಲ್ಕು ಹಾಲಿ ಬಂದರುಗಳ ನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ರಿಪೇರಿ ಕಾರ್ಯಾಚರಣೆ ನಿರ್ವಹಣೆ ವರ್ಗಾವಣೆ 40.12 ಕೋಟಿ ವೆಚ್ಚದಲ್ಲಿ ಮಾಡಲು ಅನುಮೋದನೆ ನೀಡಲಾಗಿದೆ ಎಂದರು.