Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಬೆಂಗಳೂರು ಉತ್ತರ: ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ನಗರದಲ್ಲಿ ಡಿಸಿಎಂ

"ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರ ಮಾತ್ರ ತಿಳಿಸಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು ಸಂಘಟನೆ ಮಾಡುವವನು ನಾನು. ಅವರು ಒಂದು ಸಂಸ್ಥೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ನಾವು ಪಕ್ಷದ ಮೂಲಕವೇ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಿಕೊಳ್ಳೋಣ" ಎಂದರು.