ಕನಿಷ್ಟ ಬೆಂಬಲ ಬೆಲೆಯಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರು ರೈತರಿಂದ ಗರಿಷ್ಟ ಪ್ರಮಾಣದಲ್ಲಿ ಮೆಕ್ಕೆಜೋಳ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕುಕ್ಕುಟ ಹಾಗೂ ಪಶು ಆಹಾರ ಉತ್ಪಾದನಾ ಘಟಕಗಳಿಗೆ ಅವಶ್ಯವಿರುವ ಪ್ರಮಾಣದ ಮೆಕ್ಕೆಜೋಳವನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ರೈತರಿಂದ ಖರೀದಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಕ್ಕುಟ ಹಾಗೂ ಪಶು ಆಹಾರ ಉತ್ಪದನಾ ಘಟಕಗಳ ವಾರ್ಷಿಕ ಆಹಾರ ಉತ್ಪಾದನೆ, ಮೆಕ್ಕೆಜೋಳ ಸಂಗ್ರಹ ಸಾಮಾಥ್ರ್ಯದ ಮಾಹಿತಿಯನ್ನು ಸಂಗ್ರಹಿಸಿದರು