ಬೆಂಗಳೂರು ಉತ್ತರ: ನಗರದಲ್ಲಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ರಾಜ್ಯದ ಬಂಡವಾಳ ಹೂಡಿಕೆ ಕುರಿತು ಚರ್ಚಿಸಿದ ಎಂ.ಬಿ ಪಾಟೀಲ್
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಸಚಿವ MB ಪಾಟೀಲ್ ಅವರು ಭೇಟಿಮಾಡಿ, ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ವಿದ್ಯಮಾನಗಳು ಹಾಗೂ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು. ಬಂಡವಾಳ ಹೂಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದು, 2026 ಮಧ್ಯದ ಹೊತ್ತಿಗೆ ಅನೇಕ ವಿದೇಶಿ ಕಂಪನಿಗಳು ಬಂಡವಾಳ ಹೂಡುವ ಬಗ್ಗೆ ಚರ್ಚಿಸಲಾಗಿದೆ. ಇನ್ನು ಈ ವೇಳೆ ಹಿರಿಯ ಪುತ್ರ ಬಸನಗೌಡ ಪಾಟೀಲ ಉಪಸ್ಥಿತರಿದ್ದರು.