ಹುಬ್ಬಳ್ಳಿ: ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ವಿಜಯಪುರದಿಂದ ಗಡಿಪಾರು ಮಾಡಿರುವುದು ಖಂಡನೀಯ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು.ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೂಜ್ಯ ಸ್ವಾಮಿಜಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಾಡಿದೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.ಹಿಂದುಗಳನ್ನು ಒಡೆಯುವುದನ್ನು ವಿರೋಧಸಿದ ಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ವ್ಯಾಪಕ ಚರ್ಚೆ, ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ ಸಮಾಜ ಸ್ವಾಮೀಜಿ ಪರವಾಗಿದೆ ಎಂದು ತಿಳಿಸಿದರು.