ಶಿವಮೊಗ್ಗ: ಶೀಘ್ರ ಪತ್ತೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಕುಷ್ಠರೋಗ ತಡೆಗಟ್ಟಬಹುದು: ಶಿವಮೊಗ್ಗದಲ್ಲಿ ಡಿ.ಹೆಚ್ಓ ಡಾ.ನಟರಾಜ್
ಕುಷ್ಠರೋಗವನ್ನು ಒಂದು ಸಾಮಾಜಿಕ ಕಳಂಕವಾಗಿ ಬಿಂಬಿಸಲಾಗುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಹಾಗೂ ಈ ರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚುವ ಮೂಲಕ ಇದಕ್ಕೆ ಸೂಕ್ತ ಚಿಕಿತ್ಸೆ ಪಡೆದು ಕುಷ್ಟರೋಗವನ್ನು ತಡೆಗಟ್ಟಬಹುದಾಗಿದೆ ಎಂದು ಡಿಹೆಚ್ಓ ಡಾ.ನಟರಾಜ್ ಕೆ.ಎಸ್.ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಬಾಪೂಜಿನಗರದ ನಗರ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಆಯೋಜಿಸಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.