ಚಿಕ್ಕಬಳ್ಳಾಪುರ: ಸರ್ಕಾರಿ ವಿದ್ಯಾರ್ಥಿನಿಲಯದ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ
ಸರ್ಕಾರಿ ವಿದ್ಯಾರ್ಥಿನಿಲಯದ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇಂದು ಶನಿವಾರ ಮಧ್ಯಾಹ್ನ 3:00 ಯಲ್ಲಿ ಆಸಕ್ತ ಕಟ್ಟಡ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ 2024-25ನೇ ಸಾಲಿಗೆ ಚಿಕ್ಕಬಳ್ಳಾಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುವ 100 ಸಂಖ್ಯಾಬಲದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಪ್ರತ್ಯೇಕವಾಗಿ ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಾದ ಬಾಡಿಗೆಗೆ ಕಟ್ಟಡ ಅವಶ್ಯಕವಾಗಿದ್ದು, ಆಸಕ್ತಿಯುಳ್ಳ ಕಟ್ಟಡದ ಮಾಲೀಕರು ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬಹುದೆಂದು ಇಲಾಖೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ