ಗದಗ: ಜೂನ್ 3 ರಂದು ನಗರಕ್ಕೆ ಸಿಎಂ ಆಗಮನ: ಬೀಗಿ ಪೊಲೀಸ್ ಬಂದೋಬಸ್ತ್
Gadag, Gadag | Jun 2, 2025 ಜೂನ್ 3 ರಂದು ಗದಗ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ಆಯೋಜನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಆಗಮಿಸಿ ನಂತರ ಲಕ್ಕುಂಡಿ ಗ್ರಾಮದಲ್ಲಿ ಐತಿಹಾಸಿಕ ಪ್ರಾಚ್ಯಾವಶೇಷಗಳ ಉತ್ಖನನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ನಗರದ ಕೆ. ಎಚ್ ಪಾಟೀಲ್ ಸಭಾ ಭವನದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸುಮಾರು 200 ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.