ಚಳ್ಳಕೆರೆ :ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದೀರ್ಘಾವಧಿ ಆಡಳಿತ ನಡೆಸಿ ದಾಖಲೆ ಸೃಷ್ಟಿಸಿದ ಹಿನ್ನೆಲೆಯಲ್ಲಿ ಇಂದು ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಹಿರಿಯ ಮುಖಂಡರಾದ ಪ್ರಭುದೇವ್, ಸೈಯದ್, ತಿಪ್ಪೇಸ್ವಾಮಿ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಕಾಂಗ್ರೆಸ್ ಪರಿಶಿಷ್ಠ ವರ್ಗಗಳ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಸಿ.ಟಿ.ಶ್ರೀನಿವಾಸ ಸೇರಿದಂತೆ ಹಲವರಿದ್ದರು.