ಹೆಬ್ರಿ: ಪಟ್ಟಣದಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಭಾರತ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ
Hebri, Udupi | Feb 10, 2024 ಪಟ್ಟಣದಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಭಾರತ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಹೆಬ್ರಿ ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಸಂವಿಧಾನ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರದ ಕಾರ್ಯಕ್ರಮ ಸಂವಿಧಾನ ಜಾಗೃತಿ ಜಾಥಾಗೆ ಶನಿವಾರ ಬೆಳಗ್ಗೆ ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.