ಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜನತಾ ದರ್ಶನ, 55 ಅರ್ಜಿಗಳ ಸ್ವೀಕಾರ
ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನಲ್ಲಿ ಇಂದು ಶನಿವಾರ ಮಧ್ಯಾಹ್ನ 12:30 ಗಂಟೆಯಲ್ಲಿ ಮಂಚೇನಹಳ್ಳಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮಂಚೇನಹಳ್ಳಿ ತಾಲ್ಲೂಕು ಕೇಂದ್ರಕ್ಕೆ ಜಿಲ್ಲಾಡಳಿತದಿಂದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತೆರಳಿ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರ ಅಹವಾಲು, ದೂರುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರೋಪಾಯಗಳನ್ನು ಸೂಚಿಸಲಾಯಿತು ಸಾರ್ವಜನಿಕರು ಅಹವಾಲು ಅರ್ಜಿಗಳನ್ನು ಅಧಿಕಾರಿಗಳಿಗೆ ನೀಡಿ ಪರಿಹಾರಕ್ಕಾಗಿ ಮನವಿ ಸಲ್ಲಿಸಿದರು.