ರಾಯಚೂರು: ಸೆ.19 ರಂದು ಹುಬ್ಬಳ್ಳಿ ಸಮಾವೇಶದಲ್ಲಿ ಎಲ್ಲರೂ ಭಾಗವಹಿಸಲು ಅ.ಭಾ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಪಾಟೀಲ್ ಮನವಿ
ಇದೇ ಸೆಪ್ಟೆಂಬರ್ 19 ನೇ ತಾರೀಕು ಹುಬ್ಬಳ್ಳಿ ನೇರ ಮೈದಾನದಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ರಾಯಚೂರು ಜಿಲ್ಲೆಯಾದ್ಯಂತ ಎಲ್ಲ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯ ಜನ ಭಾಗವಹಿಸುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಯಚೂರು ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ್ ತಿಳಿಸಿದ್ದಾರೆ. ಬುದುವಾರ ಮಧ್ಯಾಹ್ನ ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದಲ್ಲಿನ ವೀರಶೈವ ಲಿಂಗಾಯತರಲ್ಲಿ ಐಕ್ಯತೆಯ ಭಾವನೆ ಮೂಡಿಸಲು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮಹಾಸಭೆಯ ಅನೇಕ ಮುಖಂಡರು ಉಪಸ್ಥಿತರಿದ್ದರು.