ಶಿರಸಿ: ಟಿಆರ್.ಸಿ. ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಸಂಸದ ಕಾಗೇರಿ ಭಾಗಿ
ಶಿರಸಿ : ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶನಿವಾರ ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ನಗರದ ಟಿಆರ್.ಸಿ. ಸಭಾಭವನದಲ್ಲಿ ವಿಶೇಷ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿರಸಿ ಅಂಚೆ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿ, ಯೋಗಾಭ್ಯಾಸದ ಮಹತ್ವವನ್ನು ವಿವರಿಸಿದರು. ಶಿರಸಿ ಅಂಚೆ ವಿಭಾಗದ ಅಧೀಕ್ಷಕ ಹೂವಪ್ಪ ಜಿ ಪ್ರತಿಯೊಬ್ಬರು ತಮ್ಮ ದೈನಂದಿನ ದಿನಚರಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡಿದರು. ಸರ್ಕಾರಿ ಪ್ರೌಢ ಶಾಲೆ ಇಸಲೂರು ಶಿಕ್ಷಕ ದಿವಾಕರ ಮರಾಠೆ ಆಗಮಿಸಿ ಯೋಗ ತರಬೇತಿ ನೀಡಿದರು.