ಬಸವನ ಬಾಗೇವಾಡಿ: ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಮಹಾತ್ಮಾ ಗಾಂಧಿ ಜಯಂತಿ ಆಚರಣೆ
ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ, ವಿಶೇಷ ಪೂಜೆಯನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಗಾಂಧೀಜಿಯವರು ತಮ್ಮ ಅಹಿಂಸಾ ಮಾರ್ಗಗಳಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ವ್ಯಕ್ತಿ ಎಂದು ಹೇಳಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಉಪಸ್ಥಿತರಿದ್ದರು.